ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ಸುಗಳ ನಡುವೆ ಮುಖಮುಖಿ ಡಿಕ್ಕಿ; ದಂಪತಿಗಳಿಬ್ಬರಿಗೆ ಗಾಯ

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ಸುಗಳ ನಡುವೆ ಮುಖಮುಖಿ ಡಿಕ್ಕಿ; ದಂಪತಿಗಳಿಬ್ಬರಿಗೆ ಗಾಯ

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ಸುಗಳ ನಡುವೆ ಮುಖಮುಖಿ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆ ಎಂಬಲ್ಲಿ ಅ.1ರಂದು ಸಂಜೆ ನಡೆದಿದೆ.

ಧರ್ಮಸ್ಥಳದಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಹಾಗೂ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ನಡುವೆ ಅಡ್ಡಹೊಳೆ ಪೆಟ್ರೋಲ್ ಬಂಕ್ ನ ಸಮೀಪ ಮುಖಮುಖಿ ಡಿಕ್ಕಿ ಸಂಭವಿಸಿದೆ ಘಟನೆಯಲ್ಲಿ ಎರಡು ವಾಹನಗಳು ಜಖಂಗೊಂಡಿದ್ದು.

ಹಾಸನ ಮೂಲದ ದಂಪತಿಗಳಾದ ನಾಗೇಂದ್ರ ಪ್ರಸಾದ್(60) ಹಾಗೂ ಭಾರತಿ(54) ಎಂಬುವರು ಗಾಯಗೊಂಡಿದ್ದು ಅವರನ್ನು ಶಿರಾಡಿಯ 108 ಆಂಬುಲೆನ್ಸ್ ನ ಮೂಲಕ ಚಿಕಿತ್ಸೆಗಾಗಿ ಸಕಲೇಶಪುರದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಈ ರಸ್ತೆಯ ಮಧ್ಯೆ ಅತಿ ಹೆಚ್ಚು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಅಪಘಾತಗಳು ನಡೆಯುತ್ತಲೇ ಇದೆ. ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ಅಪಘಾತಗಳು ನಡೆಯಲು ಕಾರಣವಾಗಿದೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕುವುದರೊಂದಿಗೆ ಚಾಲಕರೊಂದಿಗೆ ಸ್ಥಳೀಯರು ರೊಚ್ಚಿಗೆದ್ದ ವಿಡಿಯೋ ಸಾಮಾಜಿಕ ಜಾಣದಲ್ಲಿ ವೈರಲ್ ಆಗುತ್ತಿದೆ.

Leave a Reply

You May Have Missed

error: Content is protected !!