ನೆಲ್ಯಾಡಿ: ಬೆಥನಿ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

ನೆಲ್ಯಾಡಿ: ಬೆಥನಿ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

ನೆಲ್ಯಾಡಿ ಬೆಥನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಅವರು ವಹಿಸಿ ಗಾಂಧೀಜಿಯ ಜೀವನ ಮೌಲ್ಯಗಳು ಹಾಗೂ ಜೀವನ ಆದರ್ಶಗಳ ಬಗ್ಗೆ ಹೇಳಿದರು. ಶಾಲೆಯ ಮುಖ್ಯಶಿಕ್ಷಕ ಜಾರ್ಜ್.ಕೆ ಥಾಮಸ್ ಅವರು ಗಾಂಧೀಜಿಯ ಜೀವನ ಮೌಲ್ಯಗಳು ವಿದ್ಯಾರ್ಥಿಗಳ ಜೀವನದಲ್ಲಿ ಕಾರ್ಯರೂಪಕ್ಕೆ ಬರಬೇಕು ಎಂದು ಹೇಳಿದರು.

ಮಹಾತ್ಮ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪ ಹಾರವನ್ನು ಹಾಕಿ ನಮನವನ್ನು ಸಲ್ಲಿಸಲಾಯಿತು. ಸಂಸ್ಥೆಯ ವಿಭಾಗಗಳ ಮುಖ್ಯಸ್ಥರು, ಫಾ.ಜೇಮ್ಸ್ ಥಾಮಸ್ ಹಾಗೂ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.

ಆಲ್ ಭ ಸ್ವಾಗತಿದರು, ಆಲಿಷ ನಿರೂಪಿಸಿದರು, ಏಂಜಲ್.ಕೆ.ಪಿ ವಂದಿಸಿದರು. ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ ಶಾಲಾ ಆವರಣವನ್ನು ಸ್ವಚ್ಛಗೊಳಿಸಿದರು.

Leave a Reply

You May Have Missed

error: Content is protected !!