ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

ಬೆಳ್ತಂಗಡಿ: ಗೋಳಿಯಂಗಡಿಯಲ್ಲಿರುವ ಐಟಿಐ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಸಜೀಪ ಮೂಲದ ಹುಲ್ಲು ತೆಗೆಯುವ ಮೆಷಿನ್ ರಿಪೇರಿ ಕೆಲಸ ಮಾಡುವ ಜಮಾಲ್ ಬಂಧಿತ ಆರೋಪಿ. ಈತ ವಿದ್ಯಾರ್ಥಿನಿಯರ ಮೊಬೈಲ್ ನಂಬರ್ ಕೇಳುತ್ತಿದ್ದು, ಕಾಲೇಜಿಗೆ ಬೈಕಿನಲ್ಲಿ ಡ್ರಾಪ್ ಮಾಡುತ್ತೇನೆ ಎಂದು ಹೇಳುತ್ತಾ ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಯುವಕನ ವರ್ತನೆಯಿಂದ ಗಾಬರಿಗೊಂಡಿದ್ದ ವಿದ್ಯಾರ್ಥಿನಿಯರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು. ಅವರು ಆರೋಪಿಯನ್ನು ವಿಚಾರಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!