ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆನೆಟ್ ರಿಶಲ್ ರಾಜ್ಯಮಟ್ಟಕ್ಕೆ ಆಯ್ಕೆ

ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆನೆಟ್ ರಿಶಲ್ ರಾಜ್ಯಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ದಕ್ಷಿಣ ಕನ್ನಡ ಮಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಎಸ್ ಡಿ ಎಂ ಮಂಗಳ ಜ್ಯೋತಿ ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ 6ನೇ ತರಗತಿ ವಿದ್ಯಾರ್ಥಿನಿ ಆನೆಟ್ ರಿಶಲ್ ಅವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಉಪನ್ಯಾಸಕರಾದ ಸಲೀಂ ಕೆ ಪಿ ಹಾಗೂ ಆನಿ ದಂಪತಿಗಳ ಪುತ್ರಿ . 9ನೇ ತರಗತಿಯ ಜಾಹಿರಾ ಮಾಲಿಕ್ ಕಂಚಿನ ಪದಕ ದೊಂದಿಗೆ ತೃಪ್ತಿಯ ಸ್ಥಾನವನ್ನು ಪಡೆದುಕೊಂಡು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಇವರು ದಿವಂಗತ ಮಾಲಿಕ್ ರವರ ಪುತ್ರಿ

ತರಬೇತಿ ನೀಡಿದ ಅಧ್ಯಾಪಕರನ್ನು ಹಾಗೂ ವಿಜೇತರಾದ ವಿದ್ಯಾರ್ಥಿನಿಯರನ್ನು ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ. ವರ್ಗೀಸ್ ಕೈಪ‍ನಡ್ಕ ಅಭಿನಂದಿಸಿದ್ದಾರೆ.

Leave a Reply

You May Have Missed

error: Content is protected !!