ಇರ್ದೆ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಶಸ್ತಿ

ಇರ್ದೆ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಶಸ್ತಿ

ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಪಾಪೆಮಜಲುನಲ್ಲಿ ಅ.22ರಂದು ನಡೆದ ಪುತ್ತೂರು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ದೆಯ ವಿದ್ಯಾರ್ಥಿಗಳಾದ ಆಕರ್ಷ್ ಗುಂಡು ಎಸೆತದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ದ್ವಿತೀಯ, ಹಾಫಿಯ 400 ಮೀಟರ್ ಓಟದಲ್ಲಿ ಪ್ರಥಮ, ಫಾತಿಮತ್ ಇಶ್ಪಾ 200 ಮೀಟರ್ ಓಟದಲ್ಲಿ ಪ್ರಥಮ, ವರ್ಷಾ.ಕೆ 400 ಮೀಟರ್ ಓಟದಲ್ಲಿ ದ್ವಿತೀಯ, ನೂತನ.ಎಂ ಉದ್ದ ಜಿಗಿತದಲ್ಲಿ ತೃತೀಯ, ಹಾಗೂ ರಿಲೇ ಓಟದಲ್ಲಿ ದಿಲೀಪ್, ಆಕರ್ಷ್, ನೂತನ್, ರಕ್ಷಕ್ ಇವರು ದ್ವಿತೀಯ ಸ್ಥಾನವನ್ನು ಪಡೆದು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ.

ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯಶಿಕ್ಷಕಿ ಲಿಂಗಮ್ಮ, ದೈಹಿಕ ಶಿಕ್ಷಣಶಿಕ್ಷಕಿ ವಾಣಿಶ್ರೀ, ಎಸ್ ಡಿ ಎಂ ಸಿ ಅಧ್ಯಕ್ಷ ಲೋಕನಾಥ್ ಅಭಿನಂದಿಸಿದರು

Leave a Reply

You May Have Missed

error: Content is protected !!