ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ಸಾಂದೀಪನಿ ವಿದ್ಯಾಸಂಸ್ಥೆ ನರಿಮೊಗರು ಇಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ರೆಣಿಲ್ ಬಾಲಕರ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಸೋನಾ ಅನುರಾಜ್ ಪ್ರೌಢ ಬಾಲಕೀಯರ ವಿಭಾಗದ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಹಾಗೂ ನವನೀತ್ 800 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಶಾಲಾ ದೈಹಿಕ ಶಿಕ್ಷಕರಾದ ಜಿಮ್ಸನ್ ವರ್ಗೀಸ್ ಹಾಗೂ ರಾಜೇಶ್ ರೈ ಇವರಿಗೆ ತರಬೇತಿ ನೀಡಿದ್ದರು.






















Leave a Reply