ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ಎಲಿಮಲೆಯಿಂದ ವರದಿಯಾಗಿದೆ.

ಥಳಿತಕ್ಕೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ‌ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.

ನಿಯಾಝ್ ಎಂಬಾತ ಹಲ್ಲೆಗೊಳಗಾದ ಯುವಕ. ಈತ ಸ್ಥಳೀಯ ಯುವತಿಯೋರ್ವಳಿಗೆ ಮೆಸೇಜ್ ಮಾಡುತ್ತಿರುವುದಾಗಿ ತಿಳಿದುಬಂದಿದ್ದು, ಈತನನ್ನು ಕರೆಸಿಕೊಂಡ ಯುವಕರ ತಂಡವೊಂದು ಹಲ್ಲೆ ನಡೆಸಿರುವುದಾಗಿ ಹೇಳಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.

Leave a Reply

You May Have Missed

error: Content is protected !!