ಶಾಂತಿನಗರ ಶಾಲೆ: ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ

ಶಾಂತಿನಗರ ಶಾಲೆ: ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ

ನೆಲ್ಯಾಡಿ: ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಸಂತ ವಿಕ್ಟರ್ ವಿದ್ಯಾಸಂಸ್ಥೆ ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆಯಲ್ಲಿ ಶಿಕ್ಷಣದ ಜೊತೆಗೆ ನಮ್ಮ ನಾಡು ನುಡಿ ಹಾಗೂ ಸಂಸ್ಕೃತಿಗೆ ಪೂರಕವಾದ ಚಟುವಟಿಕೆಗಳನ್ನು ನೀಡುತ್ತಿರುವ ಸರಕಾರಿ ಪ್ರಾಥಮಿಕ ಶಾಲೆ ಶಾಂತಿನಗರ ಗೋಳಿತ್ತಟ್ಟು ಇಲ್ಲಿಯ ಪ್ರಭಾರ ಮುಖ್ಯಶಿಕ್ಷಕ ಪ್ರದೀಪ್ ಬಾಕಿಲ ಅವರು ಆಶು ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

ಇನ್ನೋರ್ವ ಶಿಕ್ಷಕ ಮಂಜುನಾಥ ಮಣಕವಾಡ ಸಂಗೀತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದರು.

Leave a Reply

You May Have Missed

error: Content is protected !!