ಕೋಡಿಂಬಾಳ ಮರಬಿದ್ದು ವ್ಯಕ್ತಿ ಮೃತಪಟ್ಟು ದಿನವಾದರೂ ಸ್ಥಳ ಬಿಟ್ಟು ಕದಲದ ಕೋಳಿ

ಕೋಡಿಂಬಾಳ ಮರಬಿದ್ದು ವ್ಯಕ್ತಿ ಮೃತಪಟ್ಟು ದಿನವಾದರೂ ಸ್ಥಳ ಬಿಟ್ಟು ಕದಲದ ಕೋಳಿ

ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ರಸ್ತೆ ಪಕ್ಕದ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು 2 ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳವನ್ನು ಬಿಟ್ಟು ಕದಲಿಲ್ಲ.

ದೀಪಾವಳಿ ಪ್ರಯುಕ್ತ ಎಡಮಂಗಲದ ತನ್ನ ಮನೆಯಲ್ಲಿ ನಡೆಯಲಿದ್ದ ದೈವದ ಹರಕೆಗಾಗಿ ಕೋಡಿಂಬಾಳದಿಂದ ಕೋಳಿ ತೆಗೆದುಕೊಂಡು ಸ್ಕೂಟಿಯಲ್ಲಿ ಸೀತಾರಾಮ ಅವರು ಹೋಗುತ್ತಿದ್ದ ವೇಳೆ ರಸ್ತೆ ಪಕ್ಕದ ದೂಪದ ಮರ ಬಿದ್ದು ಗಂಭೀರ ಗಾಯವಾಗಿ ಮೃತಪಟ್ಟಿದ್ದರು.

ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಹಗ್ಗದಿಂದ ಕಾಲುಗಳನ್ನು ಕಟ್ಟಿದ್ದರಿಂದ ಮೃತದೇಹದ ಬಳಿಯೇ ಬಿದ್ದಿತ್ತು. ಬಳಿಕ ಸ್ಥಳದಲ್ಲಿದ್ದವರು ಕೋಳಿಯ ಕಾಲಿಗೆ ಕಟ್ಟಲಾಗಿದ್ದ ಹಗ್ಗವನ್ನು ಬಿಚ್ಚಿದ್ದರು. ಆಗ ಹತ್ತಿರದ ಕಾಡಿನೊಳಗೆ ಹೋಗಿದ್ದ ಕೋಳಿ ಘಟನಾ ಸ್ಥಳದಲ್ಲಿ ಜಮಾಯಿಸಿದ್ದ ಜನರು ಚದುರಿದ ಬಳಿಕ ಮರಬಿದ್ದು ನಜ್ಜುಗುಜ್ಜಾಗಿದ್ದ ಸೀತಾರಾಮ ಅವರ ಸ್ಕೂಟಿಯ ಮೇಲೆ ಬಂದು ಕುಳಿತಿತ್ತು. ಜನರು ಹತ್ತಿರ ಬಂದಾಗ ಪಕ್ಕದ ಮರದ ರೆಂಬೆಯ ಮೇಲೆ ಆಶ್ರಯ ಪಡೆಯುತ್ತಿದ್ದ ಕೋಳಿ 2 ದಿನ ಕಳೆದರೂ ಘಟನ ಸ್ಥಳ ಬಿಟ್ಟು ಹೋಗದಿರುವುದು ಜನರ ಸೋಜಿಗಕ್ಕೆ ಕಾರಣವಾಗಿದೆ.

Leave a Reply

You May Have Missed

error: Content is protected !!