ಶಿರಾಡಿ ಗ್ರಾಮ ಪಂಚಾಯಿತಿಗೆ ಡಾ|ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

ಶಿರಾಡಿ ಗ್ರಾಮ ಪಂಚಾಯಿತಿಗೆ ಡಾ|ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

ನೆಲ್ಯಾಡಿ: ಡಾ| ಶಿವರಾಮ ಕಾರಂತರ ಜನ್ಮ ದಿನಾಚರಣೆಯ ಅಂಗವಾಗಿ ಕೋಟಾತಟ್ಟೆ ಗ್ರಾ.ಪಂ ಮತ್ತು ಶಿವರಾಮ ಕಾರಂತ ಪ್ರತಿಷ್ಠಾನದ ವತಿಯಿಂದ ದ.ಕ ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಕ್ಕೆ ಶಿರಾಡಿ ಗ್ರಾಮ ಪಂಚಾಯಿತಿಗೆ ಡಾ| ಶಿವರಾಮ ಕಾರಂತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ನ.10ರಂದು ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಶಿರಾಡಿ ಗ್ರಾ.ಪಂ.ಅಧ್ಯಕ್ಷ ಕಾರ್ತಿಕೇಯನ್, ಪಿಡಿಒ ಯಶವಂತ, ಕಾರ್ಯದರ್ಶಿ ಶಾರದಾ ಹಾಗೂ ಗ್ರಾ.ಪಂ.ಸದಸ್ಯರು, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!