ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು

ಬೆಳ್ತಂಗಡಿ: ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮಾಲಾಡಿ ಗ್ರಾಮದ ಚೇತನ್(25 ) ಮೃತ ಯುವಕ.

ಈತ ಕಳೆದ 15 ದಿನಗಳಿಂದ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದು ಸ್ಥಳೀಯವಾಗಿ ಔಷಧೋಪಚಾರ ಮಾಡಲಾಗಿತ್ತು. ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಬಂಟ್ವಾಳ ಆಸ್ಪತ್ರೆಗೆ ತೆರಳಿ ನ.12ರಂದು ಔಷಧಿ ತರಲಾಗಿತ್ತು. ಆದರೆ ಸಂಜೆ ವೇಳೆ ವಾಂತಿ ಕಾಣಿಸಿಕೊಂಡಾಗ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Reply

You May Have Missed

error: Content is protected !!