ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

ಮಾಣಿ -ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ.

ನ.13ರ ಬುಧವಾರ ರಾತ್ರಿ ಬಂದ ಭಾರೀ ಮಳೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ಲಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಮಂಗಳೂರು-ಪುತ್ತೂರು ಸಂಪರ್ಕ ಕಡಿತಗೊಂಡಿದೆ.

ಪುತ್ತೂರು ಕಡೆಯಿಂದ ಬರುವ ವಾಹನ ವಿಟ್ಲ ಮೂಲಕ ಮತ್ತು ಮಂಗಳೂರು ಕಡೆಯಿಂದ ಬರುವ ವಾಹನಗಳು ಮಾಣಿ ಮೂಲಕ ಬದಲಿ ರಸ್ತೆ ಮೂಲಕ ತೆರಳಿದೆ. ಹೆದ್ದಾರಿಯಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದರು.

ರಾತ್ರಿಯೇ ಮರವನ್ನು ತೆರವು ಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Leave a Reply

You May Have Missed

error: Content is protected !!