ನಕ್ಸಲ್ ಮುಖಂಡ ವಿಕ್ರಂ ಗೌಡ ಎನ್ ಕೌಂಟರ್ ಗೆ ಬಲಿ

ನಕ್ಸಲ್ ಮುಖಂಡ ವಿಕ್ರಂ ಗೌಡ ಎನ್ ಕೌಂಟರ್ ಗೆ ಬಲಿ

ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ.

ಕಾರ್ಕಳ, ಹೆಬ್ರಿ ಪರಿಸರದಲ್ಲಿ ಕೆಲದಿನಗಳಿಂದ ನಕ್ಸಲ್ ಓಡಾಟ ಪತ್ರೆಯಾಗಿತ್ತು. ಈ ಹಿನ್ನಲೆಯಲ್ಲಿ ಎಎನ್ ಎಫ್ ಕೂಂಬಿಂಗ್ ಬಿಗಿಗೊಳಿಸಿತ್ತು. ಸೋಮವಾರ ರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಎಎನ್ ಎಫ್ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ದಾಳಿ-ಪ್ರತಿದಾಳಿ ನಡೆದಿದ್ದು, ದಾಳಿಗೆ ಸಿಲುಕಿ ವಿಕ್ರಂ ಗೌಡ ಬಲಿಯಾಗಿದ್ಸಾನೆ. ಉಳಿದ ನಾಲ್ವರು ಕಾಡಿನ ಹಾದಿಯಲ್ಲಿ ಪರಾರಿಯಾಗಿದ್ದಾರೆ. ಎಎನ್ ಎಫ್ಕೂಂಬಿಂಗ್ ಮುಂದುವರಿಸಿದ್ದು, ಇನ್ನುಳಿದವರಿಗಾಗಿ ಶೋಧ ನಡೆಸುತ್ತಿದೆ.

ಹೊಟೇಲ್ ನಲ್ಲಿ ಸಪ್ಲೇಯರ್ ಆಗಿ‌ ಕೆಲಸ ನಿರ್ವಹಿಸುತ್ತಿದ್ದ ವಿಕ್ರಂ ಗೌಡ ನಕ್ಸಲ್ ಚಟುವಟಿಕೆಗೆ ಸೇರ್ಪಡೆಯಾಗಿದ್ದ. ಹೆಬ್ರಿ ತಾಲೂಕಿನ ಕೂಡ್ಲು ನಿವಾಸಿಯಾಗಿದ್ದಾನೆ. ನಕ್ಸಲ್ ಮುಖಂಡನಾಗಿ ಕಾರ್ಯನಿರ್ವಹಿಸಿದ್ದ.

Leave a Reply

You May Have Missed

error: Content is protected !!