ಗೋಳಿತ್ತೊಟ್ಟು ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

ಗೋಳಿತ್ತೊಟ್ಟು ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

ನೆಲ್ಯಾಡಿ:ಮಕ್ಕಳ ದಿನಾಚರಣೆಯ ಪ್ರಯುಕ್ತ ಗೋಳಿತ್ತೊಟ್ಟು ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ನ.20ರಂದು ನಡೆಯಿತು.

ಬಾಲವಿಕಾಸ ಸಮಿತಿ ಅಧ್ಯಕ್ಷೆ ತಾಜೂನ್ನೀಸ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕೇಂದ್ರದ ಪುಟಾಣಿ ಸಾನಿಧ್ಯ ಉದ್ಘಾಟಿಸಿದರು.

ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಪುಟಾಣಿಗಳಿಗೆ ಆಯೋಜಿಸಿದ್ದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ತ್ರೀಶಕ್ತಿ ಸಂಘದ ಸದಸ್ಯೆಯರು, ಅಂಗನವಾಡಿ ಮಕ್ಕಳ ಪೋಕಷರು, ಅಂಗನವಾಡಿ ಪುಟಾಣಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ರೀತಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ಅಮಿತ ವಂದಿಸಿದರು.

Previous post

ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಉಪ್ಪಿನಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Next post

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ ದೂರಿನ ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Leave a Reply

You May Have Missed

error: Content is protected !!