3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

ಉಳ್ಳಾಲ ತಾಲೂಕಿನ ಬಾಳೆಪುಣಿ ಬಳಿಯ ಅಡಿಕೆ ಅಂಗಡಿಯೊಂದರ ಬಳಿ ಆಟವಾಡುತ್ತಿದ್ದ ಮೂರರ ಹರೆಯದ ಬಾಲಕಿಯೊಬ್ಬಳ ಮೇಲೆ 70ರ ಹರೆಯದ ವೃದ್ಧ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೂಲತಃ ಪುತ್ತೂರು ನಿವಾಸಿ, ಪ್ರಸ್ತುತ ಮುದುಂಗಾರುಕಟ್ಟೆಯಲ್ಲಿ ವಾಸವಾಗಿರುವ ಅಬ್ದುಲ್ಲಾ (70) ಆರೋಪಿ.

ಮಗುವು ಆಟವಾಡುತ್ತಿದ್ದಾಗ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದು, ಅಸ್ವಸ್ಥಗೊಂಡ ಮಗುವನ್ನು ಗಮನಿಸಿ ವೈದ್ಯಕೀಯ ತಪಾಸಣೆ ನಡೆಸಿದಾಗ ವಿಷಯ ಬಹಿರಂಗವಾಗಿದೆ ಎಂದು ಬಾಲಕಿಯ ತಾಯಿ ಕೊಣಾಜೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

You May Have Missed

error: Content is protected !!