ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಭರ್ಜರಿ ಸ್ವಾಗತ

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಭರ್ಜರಿ ಸ್ವಾಗತ

ಕಡಬ: ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೈಂಟ್ ಆನ್ಸ್ ಶಾಲೆಯ ವಿದ್ಯಾರ್ಥಿಗಳಾದ ಅವನಿ.ಪಿ.ಬಿ ಮತ್ತು ರಾಜ್ಯ ಮಟ್ಟದಲ್ಲಿ 4×100 ರಿಲೇಯಲ್ಲಿ ನಾಲ್ಕನೇ ಸ್ಥಾನ ಪಡೆದ ಪ್ರಣಾಮ್.ಪಿ.ಬಿ, ನಾಯ್ಕ್, ಸವೀಶ್, ಸಾತ್ವಿಕ್ ರೈ, ಆಶ್ಲೇಷ್ ಅವರಿಗೆ ಸೈಂಟ್ ಜೋಕಿಮ್ ಸಂಸ್ಥೆಯ ನೇತ್ವತ್ವದಲ್ಲಿ ಭರ್ಜರಿ ಸ್ವಾಗತ ನೀಡಲಾಯಿತು.

ಸಂಸ್ಥೆಯ ಸಂಚಾಲಕ ವಂ.ಪ್ರಕಾಶ್ ಪೌಲ್ ಡಿಸೋಜಾ ಚಾಲನೆ ನೀಡಿ ಬಳಿಕ ಕಡಬದ ಮುಖ್ಯರಸ್ತೆಯಲ್ಲಿ ತೆರೆದ ವಾಹನದಲ್ಲಿ ಕ್ರೀಡಾಪಟುಗಳನ್ನು ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಜೇಸಿಂತ ವೇಗಸ್, ಸೈಂಟ್ ಜೋಕಿಮ್ ಪಿಯು ಕಾಲೇಜ್ ಪ್ರಾಂಶುಪಾಲ ಕಿರಣ್ ಕುಮಾರ್, ಸೈಂಟ್ ಆನ್ಸ್ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ದಕ್ಷಾ, ಪೋಷಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!