ಅರಣ್ಯ ಇಲಾಖೆ ಸಿಬ್ಬಂದಿ ಕಚೇರಿಯಲ್ಲಿ ಕುಸಿದು ಬಿದ್ದು ಸಾವು

ಅರಣ್ಯ ಇಲಾಖೆ ಸಿಬ್ಬಂದಿ ಕಚೇರಿಯಲ್ಲಿ ಕುಸಿದು ಬಿದ್ದು ಸಾವು

ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ವೀರಕಂಬ ಮಜ್ಜೋನಿ ನಿವಾಸಿ ಜಯರಾಮ‌ ಮೂಲ್ಯ(47) ಮೃತಪಟ್ಟ ಸಿಬ್ಬಂದಿ. ಅವರು ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎನ್ನಲಾಗಿದೆ.

ಕಚೇರಿಯಲ್ಲಿ ಒಬ್ಬನೇ ಕರ್ತವ್ಯದಲ್ಲಿದ್ದು, ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ಟೇಬಲ್ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿರಬೇಕು ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಬೆಳಿಗ್ಗೆ ಸುಮಾರು 6.30 ವರೆಯವರೆಗೂ ಇಲಾಖೆಯ ಬಾಗಿಲು ಮುಚ್ಚಿಕೊಂಡಿದ್ದನ್ನು ಕಂಡು ಇಲಾಖೆಯ ಚಾಲಕ ಕಿಟಕಿ ಬಾಗಿಲು ತೆರದು ನೋಡಿದಾಗ ಜಯರಾಮ ಅವರು ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ. ಬಾಗಿಲಿನ ಚಿಲಕ ಮುರಿದು ಒಳಗೆ ಹೋಗಿ ನೋಡಿದಾಗ ಇವರು ಅದಾಗಲೇ ಮೃತಪಟ್ಟಿದ್ದರು

ಮೃತರು ತಾಯಿ ಹಾಗೂ ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!