ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯಿಂದ 30 ಲಕ್ಷ ರೂ.ವಸೂಲಿ ಮಾಡಿ ಪರಾರಿ

ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯಿಂದ 30 ಲಕ್ಷ ರೂ.ವಸೂಲಿ ಮಾಡಿ ಪರಾರಿ

ವಿಟ್ಲ: ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರು ನಲ್ಲಿ ಆಗಮಿಸಿದ ತಂಡ ಬಂದು ದಿಡೀರ್ ದಾಳಿ ನಡೆಸಿದೆ. ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಸುಮಾರು ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದೆ.

ಮನೆಯಲ್ಲಿದ್ದ ಸುಮರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದರು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

  •  

Leave a Reply

You May Have Missed

error: Content is protected !!