ಕನ್ಯಾಡಿ ಸೇವಾನಿಕೇತನಕ್ಕೆ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕನ್ಯಾಡಿ ಸೇವಾನಿಕೇತನಕ್ಕೆ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಫೆ.8 ರಂದು ಭೇಟಿ ನೀಡಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ.ವಿನಾಯಕ ರಾವ್ ಸಂಸ್ಥೆಯ ಬಗ್ಗೆ ಮಾತನಾಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಧನಸಹಾಯ ಮಾಡುವಂತೆ ಮನವಿ ಸಲ್ಲಿಸಲಾಯಿತು. ಮನವಿ ಹಸ್ತಾಂತರವನ್ನು ಸ್ವೀಕರಿಸಿ ಕಟ್ಟಡದ ನಿರ್ಮಾಣ ಶೀಘ್ರ ನೆರವೇರುವಂತೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸೇವಾಧಾಮ ಸಂಚಾಲಕರಾದ ಕೆ.ಪುರಂದರ ರಾವ್, ಸೇವಾಭಾರತಿ ಟ್ರಸ್ಟಿ ಬಿ.ಕೃಷ್ಣಪ್ಪ ಗುಡಿಗಾರ್, ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ಭಾರತೀಯ ಮಜ್ದೂರ್ ಸಂಘದ ರಾಜ್ಯಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಸಂಸ್ಥೆಯ ಸ್ವಯಂಸೇವಕರಾದ ಚಂದನ್ ಗುಡಿಗಾರ್, ಜಯರಾಜ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

  •  

Leave a Reply

You May Have Missed

error: Content is protected !!