ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನೆಲೆ: ಪುನೀತ್ ಕೆರೆಹಳ್ಳಿಗೆ ಪೊಲೀಸ್ ಘೇರಾವ್

ಪುನೀತ್ ಕೆರೆಹಳ್ಳಿ

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನೆಲೆ: ಪುನೀತ್ ಕೆರೆಹಳ್ಳಿಗೆ ಪೊಲೀಸ್ ಘೇರಾವ್

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ವತಿಯಿಂದ ಎ.19ರಂದು ಸಂಜೆ 7 ಗಂಟೆಗೆ ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದ್ದ ರಾಮೋತ್ಸವ ಕಾರ್ಯಕ್ರಮಕ್ಕೆ ಆಗಮಿಸಲು ಬರುತ್ತಿದ್ದ ಹಿಂದೂ ಹೋರಾಟಗಾರ, ಗೋ ರಕ್ಷಕ ಪುನೀತ್ ಕೆರೆಹಳ್ಳಿ ಅವರನ್ನು ಬೆಳ್ತಂಗಡಿ ಪೊಲೀಸರು ಉಜಿರೆಯ ಕಾಲೇಜು ರಸ್ತೆಯಲ್ಲಿ ಘೇರಾವ್ ಹಾಕಿ ತಡೆದಿದ್ದಾರೆ.

ದಕ್ಷಿಣ ಕನ್ನಡ ಪ್ರವೇಶ ನಿಷೇಧ ಮಾಡಿದ ಡಿಸಿ ಆದೇಶ ಕೆರೆಹಳ್ಳಿಗೆ ತೋರಿಸಿದ ಬಳಿಕ ತೆರಳಿದ್ದಾರೆ ಎನ್ನಲಾಗಿದೆ.

ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಆಗಮಿಸಿ ಭಾಷಣ ಮಾಡಲಿದ್ದಾರೆ ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಪುನೀತ್ ಕೆರೆಹಳ್ಳಿ ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆ ಕಾರಿನಲ್ಲಿ ತನ್ನ ಸುಮಾರು 200 ಬೆಂಬಲಿಗರೊಂದಿಗೆ ಬರುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ಮನವರಿಕೆ ಮಾಡಿದ್ದಾರೆ. ಈ ವೇಳೆ ಕೆರೆಹಳ್ಳಿ ಹಿಂದಿರುಗುದಾಗಿ ಹೇಳಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಆದರೆ ಉಜಿರೆಯಲ್ಲಿ ಜನಸ್ತೋಮ ಕಂಡು ಬಂದಿದ್ದು ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

  •  

Leave a Reply

You May Have Missed

error: Content is protected !!