ಶಿಶಿಲ ಗಿರಿಜನ ಕಾಲೊನಿಯಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳಿಗೆ ಚಾಲನೆ

Shishila

ಶಿಶಿಲ ಗಿರಿಜನ ಕಾಲೊನಿಯಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳಿಗೆ ಚಾಲನೆ

ಕೊಕ್ಕಡ:mಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶನದಂತೆ ಶಿಶಿಲ ಗಿರಿಜನ ಕಾಲೊನಿಯ ಅಂಗನವಾಡಿ ಕೇಂದ್ರದಲ್ಲಿ ಇಂದು ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ಅಧಿಕೃತ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಧೀನ್ ಡಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಅಪೂರ್ಣ, ಅತಿಥಿಗಳಾಗಿ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಕೆ.ರಾಮಚಂದ್ರ, ಆಶ್ರಮ ಶಾಲೆಯ ಶಿಕ್ಷಕಿ ಹೇಮಲತಾ, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ರೇವತಿ, ಆಶಾ ಕಾರ್ಯಕರ್ತೆ ರೂಪ ಉಪಸ್ಥಿತರಿದ್ದರು.

ಶ್ರೀಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿಗಳು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆ ಯಶೋದಾ ಸ್ವಾಗತಿ, ವಂದಿಸಿದರು.

  •  

Leave a Reply

You May Have Missed

error: Content is protected !!