ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯಲ್ಲಿ “ಚಾಲೆಂಜ್ ಹಂಟ್” ಪ್ರತಿಭಾನ್ವೇಷಣೆ

Nellyadi

ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯಲ್ಲಿ “ಚಾಲೆಂಜ್ ಹಂಟ್” ಪ್ರತಿಭಾನ್ವೇಷಣೆ

ನೆಲ್ಯಾಡಿ: ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಪ್ರತಿಭೆ ಅನಾವರಣಗೊಳಿಸುವ “ಚಾಲೆಂಜ್ ಹಂಟ್” ಎಂಬ ಎಂಬ ವಿನೂತನ ಕಾರ್ಯಕ್ರಮ ಶುಕ್ರವಾರದಂದು ಸಂಸ್ಥೆಯ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು.

ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಚಾರ್ಯರಾದ ಫಾ.ಡಾ.ವರ್ಗೀಸ್ ಕೈಪನಡ್ಕ ದೀಪ ಬೆಳಗಿ ಉದ್ಘಾಟಿಸಿದರು. ಅವರು ಮಾತನಾಡುತ್ತಾ, “ಈ ರೀತಿಯ ವೇದಿಕೆಗಳು ವಿದ್ಯಾರ್ಥಿಗಳಲ್ಲಿರುವ ಅನನ್ಯ ಪ್ರತಿಭೆಯನ್ನು ಹೊರಹೊಮ್ಮಿಸಲು ಪೂರಕವಾಗುತ್ತವೆ. ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಬೇಕು,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಪ್ರಾಚಾರ್ಯ ಜೋಸ್ ಎಂ.ಜೆ., ಮುಖ್ಯಶಿಕ್ಷಕ ಜಾರ್ಜ್ ಕೆ. ತೋಮಸ್, ಕಾರ್ಯಕ್ರಮದ ನಿರ್ದೇಶಕರಾದ ಹಿರಿಯ ಶಿಕ್ಷಕಿ ಧರಣಿ, ಶಿಕ್ಷಕಿಯರಾದ ಕಾವ್ಯಶ್ರೀ, ಜೋಸ್ಲಿ ಜಾರ್ಜ್, ಕ್ರಿಸ್ಟಲ್, ಅಶ್ವಿನಿ, ಅನುಷಾ ಜೈನ್ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ಶಿಕ್ಷಕ ಜೋಸ್ ಪ್ರಕಾಶ್ ನಿರ್ವಹಿಸಿದರು.

ಬಳಿಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವೇದಿಕೆಯಲ್ಲಿ ತಮ್ಮ ವಿವಿಧ ರೀತಿಯ ಪ್ರತಿಭೆಗಳನ್ನು ಪ್ರಸ್ತುತಪಡಿಸಿದರು.

  •  

Leave a Reply

You May Have Missed

error: Content is protected !!