ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Nellyadi

ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

ನೆಲ್ಯಾಡಿ: ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಕಳೆದ ಸಾಲಿನ ಎಸ್‌ ಎಸ್‌ ಎಲ್‌ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯದಲ್ಲಿ ರ್‍ಯಾಂಕ್ ಪಡೆದ ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಶನಿವಾರದಂದು ನಡೆಯಿತು.

ವಿದ್ಯಾ ಸಂಸ್ಥೆಯಲ್ಲಿ ಕಲಿತು ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ವಿದ್ಯಾರ್ಥಿಗಳಾದ ಡಾ.ಸುಪ್ರೀತ್ ಲೋಬೋ ಉಪ್ಪಿನಂಗಡಿ, ಡಾ.ಸಮಂತ್ ನೆಲ್ಯಾಡಿ, ಡಾ.ಅನೀಶ್ ಕುಮಾರ್ ಸಾದಂಗಾಯ ನೆಲ್ಯಾಡಿ, ಡಾ.ಅನು ನೆಲ್ಯಾಡಿ ಉಪಸ್ಥಿತರಿದ್ದು, ಮಾತನಾಡಿ ಸಂಸ್ಥೆಯಲ್ಲಿ ಕಲಿತ ದಿನಗಳನ್ನು ಹಾಗೂ ಈ ವಿದ್ಯಾಸಂಸ್ಥೆಯಿಂದ ಜೀವನದಲ್ಲಿ ಆದ ಬದಲಾವಣೆಗಳ ಬಗ್ಗೆ ಅನುಭವವನ್ನು ಹಂಚಿಕೊಂಡರು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು.

ಡಾ.ಸುಪ್ರೀತ್ ಲೋಬೋ ಉಪ್ಪಿನಂಗಡಿ ಮಾತನಾಡಿ ವಿದ್ಯಾರ್ಥಿಗಳು ದೇವರು, ಪಾಲಕರು ಹಾಗೂ ಶಿಕ್ಷಕರನ್ನು ಯಾವತ್ತೂ ಮರೆಯದೆ ಕಠಿಣ ಪರಿಶ್ರಮದಿಂದ ಮುಂದುವರಿದರೆ ಯಶಸ್ಸು ನಿಶ್ಚಿತ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಫಾ.ಜೈಸನ್ ಸೈಮನ್ ವಹಿಸಿದ್ದರು. ಕಾಲೇಜು ಪ್ರಾಚಾರ್ಯರಾದ ಫಾ.ಡಾ.ವರ್ಗೀಸ್ ಕೈಪನಡ್ಕ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಮಾರ್ಗದರ್ಶನ, ಪೋಷಕರ ಸಹಕಾರ ಹಾಗೂ ವಿದ್ಯಾರ್ಥಿಗಳ ಶ್ರಮ ಕಾರಣವೆಂದು ಹೇಳಿದರು. ಪಾಸು, ಫೇಲ್ ಎಂಬುದು ಜೀವನದ ಭಾಗ. ಶ್ರಮದ ಮೇಲೆ ಭವಿಷ್ಯ ರೂಪುಗೊಳ್ಳುತ್ತದೆ ಎಂಬುದನ್ನು ವಿದ್ಯಾರ್ಥಿಗಳು ಅರಿಯಬೇಕು ಎಂದರು.

ರಾಜ್ಯಕ್ಕೆ ರ‍್ಯಾಂಕ್ ಪಡೆದ ಹಿಶಾಂತ್, ಜೆಫಿನ್ ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 49 ಮಂದಿ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಪ್ರಿನ್ಸಿಪಾಲ್ ಜೋಸ್ ಎಂ.ಜೆ, ಮುಖ್ಯಶಿಕ್ಷಕ ಜಾರ್ಜ್ ಕೆ.ತೋಮಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಸನ್ನಿ, ಸದಸ್ಯರಾದ ಪ್ರೆಸ್ಸಿ ಹಾಗೂ ಕೆ.ಜಿ ವಿಭಾಗದ ಮುಖ್ಯಸ್ಥೆ ಶಿಕ್ಷಕಿ ಗೆಸ್ಸಿ ಉಪಸ್ಥಿತರಿದ್ದರು.

ಉಪಪ್ರಿನ್ಸಿಪಾಲ್ ಜೋಸ್ ಎಂ.ಜೆ ಸ್ವಾಗತಿಸಿದರು,ವಿದ್ಯಾರ್ಥಿನಿಯರಾದ ಎಲಿಸಾ ಹಾಗೂ ಸಲ್ಮಾ ಕಾರ್ಯಕ್ರಮ ನಿರೂಪಿಸಿದರು. ಮುಖ್ಯಶಿಕ್ಷಕ ಜಾರ್ಜ್ ಕೆ. ತೋಮಸ್ ವಂದಿಸಿದರು.

  •  

Leave a Reply

You May Have Missed

error: Content is protected !!