ನೆಲ್ಯಾಡಿ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Nellyady

ನೆಲ್ಯಾಡಿ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ನೆಲ್ಯಾಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ನೆಲ್ಯಾಡಿ ಗ್ರಾ.ಪಂ.ಕಚೇರಿ ಮುಂಭಾಗದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಜೂ.23ರಂದು ಬೆಳಿಗ್ಗೆ ಪ್ರತಿಭಟನೆ ನಡೆಸಿದರು.

ಬಿಜೆಪಿ ದ.ಕ.ಜಿಲ್ಲಾ ಎಸ್‍ಸಿ ಮೋರ್ಚಾದ ಮುಖಂಡ ಅಣ್ಣಿ ಎಲ್ತಿಮಾರ್, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು ಅವರು ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಗ್ಯಾರಂಟಿ ನೆಪದಲ್ಲಿ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿರುವುದರಿಂದ ಸಾಮಾನ್ಯ ಜನರಿಗೆ ಬದುಕೇ ದುಸ್ಥರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್.ಗೌಡ ಇಚ್ಲಂಪಾಡಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಉದಯಕುಮಾರ್ ದೋಂತಿಲ, ಬಿಜೆಪಿ ಸುಳ್ಯ ಮಂಡಲ ಸದಸ್ಯ ಸುಂದರ ಗೌಡ ಅತ್ರಿಜಾಲು, ನೆಲ್ಯಾಡಿ ಗ್ರಾ.ಪಂ.ಸದಸ್ಯರಾದ ಆನಂದ ಪಿಲವೂರು, ಚೇತನ, ಜಯಂತಿ, ಕೌಕ್ರಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಇಬ್ರಾಹಿಂ ಎಂ.ಕೆ., ಬೂತ್ ಸಮಿತಿ ಪದಾಧಿಕಾರಿಗಳಾದ ಪ್ರಸನ್ನ ಹೊಸವಕ್ಲು, ದೀಕ್ಷಿತ್, ಲೋಕೇಶ್ ಕೊಲ್ಯೊಟ್ಟು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರತಿಭಟನೆ ಸಭೆ ಬಳಿಕ ನೆಲ್ಯಾಡಿ ಗ್ರಾ.ಪಂ.ಕಾರ್ಯದರ್ಶಿಯವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸುರೇಶ್ ಪಡಿಪಂಡ ಮನವಿ ಪತ್ರ ವಾಚಿಸಿದರು.

  •  

Leave a Reply

You May Have Missed

error: Content is protected !!