ಕೌಕ್ರಾಡಿ ಗ್ರಾ.ಪಂ. ಪಿಡಿಒ ಆಗಿ ಶಾಲಿನಿ ಕೆ.ಬಿ. ಅಧಿಕಾರ ಸ್ವೀಕಾರ

Nellyadi

ಕೌಕ್ರಾಡಿ ಗ್ರಾ.ಪಂ. ಪಿಡಿಒ ಆಗಿ ಶಾಲಿನಿ ಕೆ.ಬಿ. ಅಧಿಕಾರ ಸ್ವೀಕಾರ

ನೆಲ್ಯಾಡಿ: ಪೆರಾಬೆ ಗ್ರಾಮ ಪಂಚಾಯಿತಿ ಪಿಡಿಒ ಆಗಿ ಸೇವೆ ಸಲ್ಲಿಸುತ್ತಿದ್ದ ಶಾಲಿನಿ ಕೆ.ಬಿ. ಅವರಿಗೆ ಹೆಚ್ಚುವರಿ ಜವಾಬ್ದಾರಿಯಾಗಿ ಕೌಕ್ರಾಡಿ ಗ್ರಾಮ ಪಂಚಾಯಿತಿಯ ಪಿಡಿಒ ಹುದ್ದೆ ನಿರ್ವಹಣೆಯ ಜವಾಬ್ದಾರಿ ನೀಡಲಾಗಿದ್ದು, ಅವರು ಆ.1ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉದಯಕುಮಾರ್ ಗೌಡ ಅವರು ಶಾಲಿನಿ ಕೆ.ಬಿ. ಅವರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದೇವಿಕಾ, ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಶುಭಾಶಯ ತಿಳಿಸಿದರು.

  •  

Leave a Reply

You May Have Missed

error: Content is protected !!