ಸಾಂತೋಮ್ ವಿದ್ಯಾನಿಕೇತನ ರೆಂಜಿಲಾಡಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

Kokkada

ಸಾಂತೋಮ್ ವಿದ್ಯಾನಿಕೇತನ ರೆಂಜಿಲಾಡಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

ರೆಂಜಿಲಾಡಿ: ಸಾಂತೋಮ್ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲೆ ರೆಂಜಿಲಾಡಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಗಸ್ಟ್ 15ರಂದು ಸಂಭ್ರಮ ಮತ್ತು ಸಡಗರದಿಂದ ಜರುಗಿತು.

ಧ್ವಜಾರೋಹಣವನ್ನು ನಿವೃತ್ತ ಸಿ.ಇ.ಒ. ಚಾಕೋ ಫಿಲಿಫ್ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ರೆ.ಫಾ.ಪೌಲ್ ಜೇಕಬ್ ವಹಿಸಿದರು. ಮುಖ್ಯ ಅತಿಥಿಗಳಾಗಿ ಮಾರ್ ಇವಾನಿಯಸ್ ಬಿ.ಎಡ್ ಕಾಲೇಜಿನ ಉಪನ್ಯಾಸಕಿ ಉಷಾ ಮನೋಜ್ ಭಾಗವಹಿಸಿ, ಸ್ವಾತಂತ್ರ್ಯದ ಮಹತ್ವ ಹಾಗೂ ಅದರ ಉಳಿವಿಗೆ ಪ್ರತಿಯೊಬ್ಬರ ಪಾತ್ರ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ರಕ್ಷಕ ಶಿಕ್ಷಕ ಸಂಘದ ಮಾಜಿ ಅಧ್ಯಕ್ಷ ಯಶೋಧರ ಬಲ್ಲಾಳ್ (ತಮ್ಮಯ್ಯ ಬಲ್ಲಾಳ್), ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸದಸ್ಯ ಇಮ್ಯಾನ್ಯುವೆಲ್ ಪಿ.ಜೆ., ಆಡಳಿತ ಮಂಡಳಿ ಕೋಶಾಧಿಕಾರಿ ವಿನೋದ್ ಟಿ.ಟಿ., ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಲಕ್ಷ್ಮಣ ಗೌಡ ಸಾಂತ್ಯಡ್ಕ, ಉಪಾಧ್ಯಕ್ಷೆ ಸಜಿ ಸ್ಕರಿಯ, ಶಾಲಾ ಮುಖ್ಯೋಪಾಧ್ಯಾಯ ಅರುಳ್ ಸಾಮಿ, ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಾಲೆಯ ಹಳೆ ವಿದ್ಯಾರ್ಥಿ ಪ್ರಜ್ವಲ್ ಕೇಪುಂಜ, ಆಟೋರಿಕ್ಷಾ ಚಾಲಕರ ಸಂಘದ ಸದಸ್ಯರು, ಸೇಂಟ್ ತೋಮಸ್ ಓರ್ಥೋಡೋಕ್ಸ್ ಚರ್ಚ್ ರೆಂಜಿಲಾಡಿ ಸದಸ್ಯರು, ಆಡಳಿತ ಮಂಡಳಿ ಸದಸ್ಯರು, ಪೋಷಕರು, ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ನೃತ್ಯ ಮತ್ತು ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮವನ್ನು ಶಾಲಾ ನಾಯಕಿ ಸಿಟ್ಲಾನ ಜೆಬಿನ್ ನಿರೂಪಿಸಿದರು. ವಿದ್ಯಾರ್ಥಿನಿ ಅನನ್ಯ ಸ್ವಾಗತಿಸಿ, ವಿದ್ಯಾರ್ಥಿನಿ ಚಾಂದಿನಿ ವಂದಿಸಿದರು.

  •  

Leave a Reply

You May Have Missed

error: Content is protected !!