ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Nellyadi

ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರಭಕ್ತಿ ಉತ್ಸಾಹದೊಂದಿಗೆ ಜರುಗಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಕೇಂದ್ರದ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಶಿಶಿರಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ನೆನಪಿಸಿಕೊಂಡು, ಸ್ವಾತಂತ್ರ್ಯವು ದೇಶಕ್ಕಾಗಿ ಹೋರಾಡಿದ ಅನೇಕ ಹೋರಾಟಗಾರರ ತ್ಯಾಗದ ಫಲ. ನಮ್ಮ ಕರ್ತವ್ಯವೆಂದರೆ ಈ ಸ್ವಾತಂತ್ರ್ಯವನ್ನು ಕಾಪಾಡಿ, ಆರೋಗ್ಯ, ಶಿಕ್ಷಣ, ಸ್ವಚ್ಛತೆ ಹಾಗೂ ಅಭಿವೃದ್ಧಿಯ ಮಾರ್ಗದಲ್ಲಿ ದೇಶವನ್ನು ಮುಂದೂಡಲು ಶ್ರಮಿಸುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಅನ್ನಮ್ಮ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಲೀನಾ, ಲೀಲಾ, ಸಮುದಾಯ ಆರೋಗ್ಯ ಸುರಕ್ಷಾಧಿಕಾರಿಗಳಾದ ಪ್ರಜ್ವಲ್, ಸುಧಾ, ಶ್ಯಾಮಲ, ದೀಪ್ತಿ, ದೀಪಿಕಾ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಸಮಾರೋಪಗೊಂಡಿತು.

  •  

Leave a Reply

You May Have Missed

error: Content is protected !!