ನೆಲ್ಯಾಡಿ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ, ಪ್ರತಿಜ್ಞಾವಿಧಿ ಸ್ವೀಕಾರ

ಮಂಗಳೂರು ವಿಶ್ವವಿದ್ಯಾನಿಲಯ

ನೆಲ್ಯಾಡಿ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ, ಪ್ರತಿಜ್ಞಾವಿಧಿ ಸ್ವೀಕಾರ

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜು ನೆಲ್ಯಾಡಿಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವು ಬುಧವಾರ ದಂದು ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಹಾವಿದ್ಯಾಲಯದ ಸಮಾಜಶಾಸ್ತ್ರ ಉಪನ್ಯಾಸಕಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ, ಕಡಬ–ಸುಳ್ಯ ವಲಯದ ರಾಷ್ಟ್ರೀಯ ಸೇವಾ ಯೋಜನಾ ಸಂಚಾಲಕರಾದ ಆರತಿ ಕೆ. ಆಗಮಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. “ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವ ವಿಕಸನಗೊಂಡು ಭವಿಷ್ಯದಲ್ಲಿ ಯಶಸ್ಸು ಸಾಧಿಸಲು ಸಾಧ್ಯ” ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಎನ್.ಎಸ್.ಎಸ್. ಸ್ವಯಂಸೇವಕರು ಶಿಸ್ತು, ನೈತಿಕ ಮೌಲ್ಯಗಳಿಗೆ ಬದ್ಧರಾಗಿರುವುದಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ವಿದ್ಯಾರ್ಥಿ ಸಂಘದ ಸಂಚಾಲಕರಾದ ಡಾ. ಸೀತಾರಾಮ ಪಿ. ಅವರು ಪ್ರಸ್ತಾವಿಕ ನುಡಿಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಶ್ರುತಿ ವಂದಿಸಿದರು. ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದರು.

  •  

Leave a Reply

You May Have Missed

error: Content is protected !!