ಸೌತಡ್ಕ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನೂತನ ಕಟ್ಟಡದ ಶಿಲಾನ್ಯಾಸ

Sowthadka

ಸೌತಡ್ಕ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನೂತನ ಕಟ್ಟಡದ ಶಿಲಾನ್ಯಾಸ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಅ.24ರ ಬೆಳಗ್ಗೆ ಅದ್ದೂರಿಯಾಗಿ ನೆರವೇರಿತು.

ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಮಹಾಗಣಪತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಶಿಲಾನ್ಯಾಸ ಕಲ್ಲನ್ನು ಮೆರವಣಿಗೆಯ ಮೂಲಕ ಸ್ಥಳಕ್ಕೆ ಕೊಂಡೊಯ್ಯಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶಿಲಾನ್ಯಾಸ ಪೂಜೆ ನಡೆಯಿತು. ಬಳಿಕ ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರು ಶಿಲಾನ್ಯಾಸ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆಗಮಿಸಿ ಶುಭಾಶಯ ಕೋರಿದರು.

ನಂತರ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಬ್ರಿಜೇಶ್ ಚೌಟ ನೆರವೇರಿಸಿ ಮಾತನಾಡಿದ ಅವರು ಶ್ರೀ ಮಹಾಗಣಪತಿ ಆಶೀರ್ವಾದದಿಂದ ಈ ಶಾಲಾ ಕಟ್ಟಡದ ಕೆಲಸ ಶೀಘ್ರವಾಗಿ ಪೂರ್ಣಗೊಳ್ಳಲಿ ಎಂದುಹಾರೈಸಿದರು.

ವೇದಿಕೆಯಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಹರೀಶ್ ಪೂಂಜಾ, ಶಾಸಕಿ ಭಾಗೀರಥಿ ಮುರುಳ್ಯ, ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ, ರಾಜ್ ಬೋರ್ ವೆಲ್ಸ್ ಮಾಲಕ ಕೃಷ್ಣರಾಜ್, ಪುತ್ತೂರು ಎಸ್.ಆರ್. ಬಿಲ್ಡರ್ಸ್ ಮತ್ತು ಡೆವಲಪರ್ಸ್ ಮಾಲಕ ಶಿವಪ್ರಸಾದ್ ಇಜ್ಜಾವು, ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಕೆ. ಸತೀಶ್ ರಾವ್, ಕಾರ್ಯದರ್ಶಿ ಕೆ.ಎಂ. ಕೃಷ್ಣ ಭಟ್, ಕಡಬ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ, ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಕಾರ್ಯದರ್ಶಿ ರಾಘವೇಂದ್ರ ನಾಯಕ್, ಸಮಿತಿಯ ಸದಸ್ಯರಾದ ಬಾಲಕೃಷ್ಣ ನೈಮಿಷ, ಜಯರಾಮ್ ನೆಲ್ಲಿತ್ತಾಯ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಕಟ್ಟಡ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಪ್ರಸ್ತಾವಿಕವಾಗಿ ಮಾತನಾಡಿ,ಸ್ವಾಗತಿಸಿದರು. ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿದರು.

  •  

Leave a Reply

You May Have Missed

error: Content is protected !!