ಗಾಂಜಾ ಮಾರಾಟ: 400 ಗ್ರಾಂ ನಿಷೇಧಿತ ಮಾದಕ ವಸ್ತು ಸಹಿತ ಆರೋಪಿ ಬಂಧನ

ಗಾಂಜಾ ಮಾರಾಟ: 400 ಗ್ರಾಂ ನಿಷೇಧಿತ ಮಾದಕ ವಸ್ತು ಸಹಿತ ಆರೋಪಿ ಬಂಧನ

ಗಾಂಜಾ ಮಾರಾಟ: 400 ಗ್ರಾಂ ನಿಷೇಧಿತ ಮಾದಕ ವಸ್ತು ಸಹಿತ ಆರೋಪಿ ಬಂಧನ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪುತ್ತೂರು ನಗರ ಠಾಣಾ ಪಿ.ಎಸ್‌.ಐ ಜನಾರ್ಧನ ಕೆ.ಎಂ ಅವರು ಸಿಬಂದಿಗಳೊಂದಿಗೆ ಜ.2 ರಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಸಂದರ್ಭದಲ್ಲಿ ಶಂಕಿತ ವ್ಯಕ್ತಿಯನ್ನು ತಡೆದು ವಿಚಾರಣೆ ನಡೆಸಿದಾಗ ಆತನು ಪುತ್ತೂರು ಕಸಬಾ ಗ್ರಾಮದ ನಿವಾಸಿ ಮಹಮ್ಮದ್ ತೌಸೀಫ್ (36) ಎಂಬುದಾಗಿ ತಿಳಿದುಬಂದಿದೆ. ತನಿಖೆ ವೇಳೆ ತನ್ನ ಬಳಿ ನಿಷೇಧಿತ ಗಾಂಜಾ ಇರುವುದಾಗಿ ಆತನು ಒಪ್ಪಿಕೊಂಡಿದ್ದು, ತಪಾಸಣೆ ನಡೆಸಿದಾಗ ಸುಮಾರು 400 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ಆರೋಪಿಯನ್ನು ವಶಕ್ಕೆ ಪಡೆದು ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 02/2026ರಂತೆ, ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 8(ಸಿ), 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

  •  
Previous post

ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, ಆಶೀರ್ವಚನ

Next post

ನೆಲ್ಯಾಡಿ: ಕಟ್ಟೆಮಜಲು ಶ್ರೀ ಶೀರಾಡಿ ಧೂಮಾವತಿ–ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ನೇಮೋತ್ಸವ

Leave a Reply

You May Have Missed

error: Content is protected !!