ನೆಲ್ಯಾಡಿ: 2038ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

ನೆಲ್ಯಾಡಿ:2038ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

ನೆಲ್ಯಾಡಿ: 2038ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

ನೆಲ್ಯಾಡಿ: ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಹಾಗೂ ಕಡಬ ತಾಲೂಕು ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಯೋಗದಲ್ಲಿ ಜ.20ರಿಂದ 27ರ ತನಕ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ 2038ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ರಾಜರ್ಷಿ, ಪದ್ಮವಿಭೂಷಣ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರು ಬಿಡುಗಡೆಗೊಳಿಸಿದರು.

ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಇದರ ಅಧ್ಯಕ್ಷರಾದ ಬಾಲಕೃಷ್ಣ ಬಾಣಜಾಲು, ಕಾರ್ಯದರ್ಶಿಯಾಗಿರುವ ಶ್ರೀ ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್‍ಕುಮಾರ್, ಕೋಶಾಧಿಕಾರಿ ಸೆಬಾಸ್ಟಿಯನ್ ಪಿ.ಜೆ., ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ.ಜಿಲ್ಲಾ ಘಟಕದ ಸದಸ್ಯರಾದ ಜಯಾನಂದ ಬಂಟ್ರಿಯಾಲ್, ಇಂದುಶೇಖರ ಶೆಟ್ಟಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ.ಸವಣೂರು, ಸದಸ್ಯ ತುಕಾರಾಮ ಶೆಟ್ಟಿ ನೆಲ್ಯಾಡಿ ಉಪಸ್ಥಿತರಿದ್ದರು.

  •  

Leave a Reply

You May Have Missed

error: Content is protected !!