ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾದ ಬೈಕ್ ಸವಾರ






ವಿಟ್ಲ: ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ನಡೆದಿದೆ.
ಕೋಡಪದವು ಮದಕದ ನಿವಾಸಿಯೊಬ್ಬರ ಮಗು ಮನೆಯ ಮುಂಭಾಗ ಆಟವಾಡುತ್ತಿದ್ದಾಗ, ಕೆಟಿಎಂ ಬೈಕಿನಲ್ಲಿ ಬಂದ ವ್ಯಕ್ತಿಯೋರ್ವ ಮಗುವಿನ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ಕೃತ್ಯದ ದೃಶ್ಯವು ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕಿನಲ್ಲಿ ಸವಾರನು ಹೆಲ್ಮೆಟ್ ಧರಿಸಿ ವೇಗವಾಗಿ ಚಲಿಸುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದೆ.



















Leave a Reply