ಪಿಯುಸಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ: ಕೆಇಎ

ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ- 1 ಮತ್ತು ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೋ ಆ ಅಂಕಗಳನ್ನೇ ಸಿಇಟಿ (CET) ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

ಕೆಲ ಅಭ್ಯರ್ಥಿಗಳು ಪರೀಕ್ಷೆ-1ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು ಸಿಇಟಿ ರ‍್ಯಾಂಕ್‌ಗೆ ಪರಿಗಣಿಸಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿಯ ಎರಡೂ ಪರೀಕ್ಷೆಗಳ ಫಲಿತಾಂಶ ಬಂದ ನಂತರವೇ ಸಿಇಟಿ ಫಲಿತಾಂಶ ಪ್ರಕಟಿಸುವುದು. ಹೀಗಾಗಿ ಎರಡನೇ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವುದಿಲ್ಲ ಎನ್ನುವುದು ಸುಳ್ಳು. ಇಂತಹ ವದಂತಿಗಳಿಗೆ ಕಿವಿ ಕೊಡಬೇಡಿ ಎಂದು ಹೇಳಿದರು.

ಕರ್ನಾಟಕ ರಾಜ್ಯ ಪಠ್ಯ ಕ್ರಮದ ಪಿಯುಸಿ ಅಭ್ಯರ್ಥಿಗಳಿಗೆ ಮಾತ್ರ ಈ ಎರಡು ಪರೀಕ್ಷೆಗಳ ನಿಯಮ ಅನ್ವಯವಾಗುತ್ತದೆ. ಉಳಿದಂತೆ ಕೇಂದ್ರ ಹಾಗೂ ಇತರ ರಾಜ್ಯಗಳ ಬೋರ್ಡ್ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

Leave a Reply

You May Have Missed

error: Content is protected !!