ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ






ಸುಳ್ಯ: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕರಾಗಿದ್ದ ಮಾಧವ ಗೌಡ (50) ಅವರು ಬುಧವಾರದಂದು ಹೃದಯಾಘಾತದಿಂದ ನಿಧನರಾಗಿದ್ದಾರೆ
ಕಾಣಿಯೂರು ಕಟ್ಟತ್ತಾರು ನಿವಾಸಿಯಾಗಿದ್ದ ಮಾಧವ ಗೌಡ ಅವರು ಕಳೆದ ಒಂದು ವರ್ಷದ ಹಿಂದಷ್ಟೇ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿದ್ದರು. ಕರ್ತವ್ಯದ ಅವಧಿಯಲ್ಲಿ ಅವರು ತಮ್ಮ ಸೇವಾಭಾವ ಮತ್ತು ಜನಾನುರಾಗದಿಂದ ಗುರುತಿಸಿಕೊಂಡಿದ್ದರು ಎಂದು ಸಹೋದ್ಯೋಗಿಗಳು ಸ್ಮರಿಸಿದ್ದಾರೆ.
ಇಂದು ಅವರಿಗೆ ಆಕಸ್ಮಿಕವಾಗಿ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಚಿಕಿತ್ಸೆ ನೀಡಲಾಗಿದ್ದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಕುಟುಂಬದವರು ಹಾಗೂ ಬಂಧು-ಮಿತ್ರರು ಅಂತಿಮ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ.
ಮೃತರು ಪತ್ನಿ, ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರ ಅಕಾಲಿಕ ನಿಧನಕ್ಕೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಸ್ಥಳೀಯ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


















Leave a Reply