ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ; ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ

ಕೊಕ್ಕಡ: ಶಿಶಿಲೇಶ್ವರ ದೇವಸ್ಥಾನನಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 14ರಂದು ಆರಂಭಗೊಂಡಿದ್ದು, ಮೇ 22ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಲಿದೆ. ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮಹೋತ್ಸವದ ಪೂಜಾ ಕಾರ್ಯಗಳು ನೆರವೇರಲಿವೆ.

ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಗ್ರಾಮಸ್ಥರಿಂದ ಸಂಪ್ರದಾಯಬದ್ಧ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಭಕ್ತರು ದೇವರಿಗೆ ವಿಶೇಷ ಕಾಣಿಕೆಗಳನ್ನು ಅರ್ಪಿಸಿ ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸಿದರು.

ರಾತ್ರಿ ವಾಸ್ತು ಬಲಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಪೂಜೆ, ಕಿಲಮರಿತ್ತಾಯ ನೇಮ ಹಾಗೂ ಧ್ವಜಾರೋಹಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳುನಡೆಯಲಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಸುನೀಲ್ ಗೋಖಲೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸೂರಜ್ ನೆಲ್ಲಿತ್ತಾಯ, ಸದಸ್ಯರಾದ ಪಿ.ರಾಮ ಕಾರಂತ (ಅರ್ಚಕರು), ಕೆ. ಶ್ರೀಧರ ರಾವ್ ಕಳೆಂಜ, ಚೆನ್ನಪ್ಪ ನಲ್ಕೆ, ಸುಂದರ ಗೌಡ, ನಾರಾಯಣ ಸುವರ್ಣ, ಪ್ರೇಮ, ರಮೇಶ ಗೌಡ, ವಿಮಲ, ಅರ್ಚಕರು, ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿ ವರ್ಗ, ಪಾರಂಪರಿಕ ಸೇವಾಕರ್ತರು ಹಾಗೂ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!