ಧರ್ಮಸ್ಥಳ ಪ್ರಕರಣ ಎಸ್ಐಟಿಯಿಂದ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆ

ಧರ್ಮಸ್ಥಳ ಪ್ರಕರಣ ಎಸ್ಐಟಿಯಿಂದ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆ

ಧರ್ಮಸ್ಥಳ ಪ್ರಕರಣ ಎಸ್ಐಟಿಯಿಂದ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆ

 

ಧರ್ಮಸ್ಥಳ ಪ್ರಕರಣ ಎಸ್ಐಟಿಯಿಂದ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯ ಆರಂಭದಲ್ಲಿ ನ್ಯಾಯಾಲಯಕ್ಕೆ ತಂದಿದ್ದ ತಲೆಬುರುಡೆಯನ್ನು ಬಂಗ್ಲೆಗುಡ್ಡೆಯಲ್ಲಿ ತೆಗೆಯಲಾಗಿದ್ದು ಈ ಮಾನವನ ತಲೆ ಬುರುಡೆ ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಬಂಟ್ವಾಳ ನಿವಾಸಿ ಪ್ರದೀಪ್ ಕುಲಾಲ್ ಮಾನವನ ತಲೆ ಬರುಡೆ ತೆಗೆದ ಸ್ಥಳದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮರು ಸೃಷ್ಟಿ ಮಾಡಿ ಘಟನಾ ಸ್ಥಳವನ್ನು ಎಫ್ಎಸ್ಎಲ್ ಅಧಿಕಾರಿಗಳು ಖಚಿತ ಪಡಿಸಿ ಎಸ್ಐಟಿ ಗೆ ವರದಿ ನೀಡಲು ಬೆಂಗಳೂರಿನಿಂದ ಅಗಮಿಸಿದ ಎಫ್ಎಸ್ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್ಐಟಿ ಅಧಿಕಾರಿಗಳು ಮೇ.21 ರಂದು ಮಧ್ಯಾಹ್ನ 2:40 ಕ್ಕೆ ಪ್ರಕರಣದ ಸಾಕ್ಷಿಯಾಗಿರುವ ಪ್ರದೀಪ್ ಕುಲಾಲ್ ನನ್ನು ಅಧಿಕಾರಿಗಳು ಕರೆದುಕೊಂಡು ಬಂದು ಪರಿಶೀಲನೆ ನಡೆಸಿ ಮಹಜರು ಕಾರ್ಯ ಆರಂಭಿಸಿದ್ದಾರೆ.

ಆರಂಭದಲ್ಲಿ ನಡೆಸಲಾಗಿದ್ದ ಮಹಜರು ಸಮರ್ಪಕವಾಗಿ ನಡೆದಿಲ್ಲ ಎಂಬ ಕಾರಣಕ್ಕೆ ಇದೀಗ ಮತ್ತೆ ಮಹಜರು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ

 

Previous post

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Next post

ದ್ವಿತೀಯ ಪಿಯುಸಿ ಮರುಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ; ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಯಾನ ಪೊನ್ನಮ್ಮಗೆ 600ಕ್ಕೆ 600 ಅಂಕ

Leave a Reply

You May Have Missed

error: Content is protected !!