ಕಾರಿಗೆ ಲಾರಿ ಡಿಕ್ಕಿ – 5 ಮಂದಿಗೆ ಗಂಭೀರ ಗಾಯ

ಕಾರಿಗೆ ಲಾರಿ ಡಿಕ್ಕಿ – 5 ಮಂದಿಗೆ ಗಂಭೀರ ಗಾಯ

ಕಾರಿಗೆ ಲಾರಿ ಡಿಕ್ಕಿ – 5 ಮಂದಿಗೆ ಗಂಭೀರ ಗಾಯ

 

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಕಾರ್ಕಳ ತಾಲೂಕಿನ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ಯಾತ್ರೆ ಕೈಗೊಳ್ಳಲು ವ್ಯಾಗನರ್ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿ ಸಮೀಪದ ಕೂಟೇಲು ಬಳಿ ಕಾರು ಸಂಚರಿಸುತ್ತಿದ್ದ ವೇಳೆ ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಚಾಲಕ ದೀಪಕ್ (45), ಗುರುರಾಜ್ (46), ಧನುಷ್ (15), ಭಾರತಿ (48) ಹಾಗೂ ಗೀತಾ (55) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಲಾರಿ ಚಾಲಕ ದಾಮೋದರ್ ಅಪಾಯದಿಂದ ಪಾರಾಗಿದ್ದಾರೆ.

ಘಟನೆ ಸಂಭವಿಸಿದಾಗ ಗಾಯಾಳುಗಳನ್ನು ಸ್ಥಳೀಯರಾದ ಯು.ಟಿ. ಫಾಯಾಜ್, ವಿದ್ಯಾಧರ ಜೈನ್, ಝಕಾರಿಯಾ ಹಾಗೂ ಇತರರು ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ನೆರವಾದರು. ಈ ಸಂಬಂಧ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Leave a Reply

You May Have Missed

error: Content is protected !!