ಉದನೆ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

ಉದನೆ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

ಉದನೆ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

ಯೋಗದಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ – ಶ್ರೀಧರ ಗೌಡ

 

ಉದನೆ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

ಉದನೆ: ಇಲ್ಲಿನ ಸೈಂಟ್ ಆಂಟನೀಸ್ ಪ್ರೌಢ ಶಾಲೆ ಹಾಗೂ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನ ಜಂಟಿ ಆಶ್ರಯದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸೈಂಟ್ ಆಂಟನೀಸ್ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಶ್ರೀಧರ ಗೌಡ ಮಾತನಾಡಿ, ಯೋಗವು ದೇಹ ಮತ್ತು ಮನಸ್ಸನ್ನು ಶುದ್ಧಗೊಳಿಸುವ ಶಕ್ತಿಯನ್ನು ಹೊಂದಿದೆ ಎಂದು ಹೇಳಿದರು. ದೇಹದ ಆರೋಗ್ಯ ಕಾಪಾಡಲು ಉತ್ತಮ ಆಹಾರ ಸೇವನೆ ಅಗತ್ಯವಾಗಿದ್ದು, ಮನಸ್ಸಿನ ಆರೋಗ್ಯ ಕಾಪಾಡಲು ಉತ್ತಮ ನಡವಳಿಕೆ ಮುಖ್ಯವಾಗಿದೆ. ದೇಹ ಹಾಗೂ ಮನಸ್ಸು ಆರೋಗ್ಯಪೂರ್ಣವಾಗಿದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಶ್ ರೈ ಹಾಗೂ ಜಿಮ್ಸನ್ ವರ್ಗೀಸ್ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳ ಕುರಿತು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹ ಸಂಚಾಲಕರಾದ ಡೀಕನ್ ಜಾರ್ಜ್, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಶಿಕ್ಷಕ ಪ್ರಕಾಶ್, ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Leave a Reply

You May Have Missed

error: Content is protected !!