ನೆಲ್ಯಾಡಿ: ಹೊಸಮಜಲು ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ: ಶಾಲಾ ಆವರಣ ಸ್ವಚ್ಛತಾ ಕಾರ್ಯ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ಹೊಸಮಜಲು ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಂಗವಾಗಿ ಶಾಲೆಯ ಆವರಣವನ್ನು ಸ್ವಚ್ಛಗೊಳಿಸಿ, ವಿದ್ಯಾರ್ಥಿಗಳಿಗೆ ಶುಚಿತ್ವದ ಪರಿಸರ ಒದಗಿಸುವ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಶಾಲಾ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಶಾಲೆಯ ಮುಖ್ಯಶಿಕ್ಷಕಿ ವೀಣಾ ಮಸ್ಕರೇನಸ್, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಹಾಗೂ ಒಕ್ಕೂಟದ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡು ಸ್ವಚ್ಛತಾ ಕಾರ್ಯವನ್ನು ಯಶಸ್ವಿಗೊಳಿಸಿದರು.

Leave a Reply

You May Have Missed

error: Content is protected !!