ಕೊಕ್ಕಡ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ: 8 ಕೇಂದ್ರಗಳಲ್ಲಿ ಪುಟಾಣಿಗಳಿಗೆ ಪೋಲಿಯೋ ಹನಿ

ಕೊಕ್ಕಡ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಭಾನುವಾರ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಐದು ವರ್ಷದೊಳಗಿನ ಪುಟಾಣಿ ಮಕ್ಕಳಿಗೆ ಪೋಲಿಯೋ ಲಸಿಕೆ (ಹನಿ) ನೀಡುವ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು.

ಅಭಿಯಾನಕ್ಕೆ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ. ಪ್ರಕಾಶ್ ಅವರು ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಅಧಿಕೃತ ಚಾಲನೆ ನೀಡಿದರು. ಬಳಿಕ ಕೇಂದ್ರಕ್ಕೆ ಆಗಮಿಸಿದ ಮಕ್ಕಳಿಗೆ ಆರೋಗ್ಯ ಸಿಬ್ಬಂದಿ ಪೋಲಿಯೋ ಹನಿಯನ್ನು ನೀಡಿದರು.

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿರುವ ಪಟ್ರಮೆ ಹಾಗೂ ನಿಡ್ಲೆ ಉಪ ಆರೋಗ್ಯ ಕೇಂದ್ರಗಳು ಸೇರಿದಂತೆ ಉಪ್ಪಾರಪಳಿಕೆ, ಸೌತಡ್ಕ, ಬೂಡುಜಾಲು, ನಿಡ್ಲೆ, ಪಟ್ಟೂರು ಸೇರಿದಂತೆ ಒಟ್ಟು 8 ಕೇಂದ್ರಗಳಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅರ್ಹ ಮಕ್ಕಳಿಗೆ ಲಸಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಡಾ. ತುಷಾರ, ಡಾ. ಚೈತ್ರ, ವೈದ್ಯಕೀಯ ಹಾಗೂ ಅರೆವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಕ್ರಿಯವಾಗಿ ಪಾಲ್ಗೊಂಡು ಅಭಿಯಾನವನ್ನು ಯಶಸ್ವಿಗೊಳಿಸಿದರು.

ಮಕ್ಕಳನ್ನು ಪೋಲಿಯೋ ಮುಕ್ತ ಸಮಾಜದತ್ತ ಕೊಂಡೊಯ್ಯುವ ಉದ್ದೇಶದಿಂದ ಪ್ರತಿಯೊಬ್ಬ ಪೋಷಕರೂ ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

Leave a Reply

You May Have Missed

error: Content is protected !!