ವಿಟ್ಲ : ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ವಿಟ್ಲ: ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ವಿಟ್ಲ : ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

 

ವಿಟ್ಲ: ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ವಿಟ್ಲ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಳ್ತಂಗಡಿ ನಿವಾಸಿ ರಾಜೇಶ್(41) ಎಂಬಾತನು ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ವಿಟ್ಲ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿಪಿಸಿ ವೆಂಕಪ್ಪ ಹಾಗೂ ಶಿವಾನಂದ ಅವರು ಜು.6ರಂದು ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

 

Leave a Reply

You May Have Missed

error: Content is protected !!