ಉಪ್ಪಿನಂಗಡಿ: ಚದುರಂಗ ಸ್ಪರ್ಧೆಯಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ವೃದ್ಧಿ ರೈ, ದಕ್ಷ್ ರಾಜ್ಯ ಮಟ್ಟಕ್ಕೆ ಆಯ್ಕೆ

ಉಪ್ಪಿನಂಗಡಿ: ಚದುರಂಗ ಸ್ಪರ್ಧೆಯಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ವೃದ್ಧಿ ರೈ, ದಕ್ಷ್ ರಾಜ್ಯ ಮಟ್ಟಕ್ಕೆ ಆಯ್ಕೆ

ಉಪ್ಪಿನಂಗಡಿ: ಚದುರಂಗ ಸ್ಪರ್ಧೆಯಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ವೃದ್ಧಿ ರೈ, ದಕ್ಷ್ ರಾಜ್ಯ ಮಟ್ಟಕ್ಕೆ ಆಯ್ಕೆ

 

ಉಪ್ಪಿನಂಗಡಿ: ಕಡಬದ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭಾರತಿ ಕರ್ನಾಟಕದ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಸ್ಪರ್ಧೆಯ 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿನಿ ವೃದ್ಧಿ ರೈ ತೃತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅದೇ ರೀತಿ 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿ ದಕ್ಷ್ ತೃತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯ ಸಂಚಾಲಕರು, ಆಡಳಿತ ಮಂಡಳಿಯ ಅಧ್ಯಕ್ಷರು, ಮುಖ್ಯಗುರುಗಳು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

 

Previous post

ಉಜಿರೆ: ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Next post

ಶಿಶಿಲ: ಕಾರೆಗುಡ್ಡೆ ರಸ್ತೆ ದುರಸ್ಥಿಗೆ ಶ್ರಮದಾನ: ಶೌರ್ಯ ವಿಪತ್ತು ನಿರ್ವಹಣಾ ಘಟಕ–ಗ್ರಾಮ ಪಂಚಾಯತ್ ಜಂಟಿ ಕಾರ್ಯಾಚರಣೆ

Leave a Reply

You May Have Missed

error: Content is protected !!