ಕೊಕ್ಕಡ: ಕಾಡಾನೆ ದಾಳಿಗೆ ಬಲಿಯಾದ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ.ಪುಷ್ಪಗಿರಿ ಸಾಂತ್ವನ; ಆರ್ಥಿಕ ನೆರವು










ಕೊಕ್ಕಡ: ಕಾಡಾನೆ ದಾಳಿಗೆ ಬಲಿಯಾಗಿ ಮೃತಪಟ್ಟ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಅವರ ನಿವಾಸಕ್ಕೆ ಧಾರ್ಮಿಕ ಹಾಗೂ ಯುವ ಮುಖಂಡರಾದ ಕಿರಣ್ ಚಂದ್ರ ಡಿ.ಪುಷ್ಪಗಿರಿ ಅವರು ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಮೃತ ಬಾಲಕೃಷ್ಣ ಗೌಡ ಅವರ ಪತ್ನಿ ಹಾಗೂ ಕುಟುಂಬ ಸದಸ್ಯರನ್ನು ಭೇಟಿಯಾದ ಅವರು, ಈ ದುರ್ಘಟನೆ ಅತ್ಯಂತ ನೋವುಂಟು ಮಾಡಿದ್ದು, ಕುಟುಂಬದ ದುಃಖದಲ್ಲಿ ತಾವು ಸಹ ಭಾಗಿಯಾಗಿರುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಕುಟುಂಬದವರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು.
ಕಾಡಾನೆ ದಾಳಿಯಿಂದ ಕುಟುಂಬದ ಮುಖ್ಯ ಆಧಾರಸ್ತಂಭವನ್ನು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿಯಾಗಿದ್ದು, ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ಮೃತರ ಕುಟುಂಬಕ್ಕೆ ಘೋಷಿಸಿರುವ ಪರಿಹಾರ ಹಾಗೂ ಇತರೆ ಸೌಲಭ್ಯಗಳು ಶೀಘ್ರದಲ್ಲಿ ಸಂಪೂರ್ಣವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ಪರಿಹಾರ ಕಂಡುಹಿಡಿಯಲು ಅರಣ್ಯ ಇಲಾಖೆ ಹಾಗೂ ಸರ್ಕಾರ ಸಮನ್ವಯದಿಂದ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಾನವ–ವನ್ಯಜೀವಿ ಸಂಘರ್ಷವನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸುವುದು ಇಂದಿನ ಅಗತ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಮೃತರ ಬಂಧುಗಳು ಉಪಸ್ಥಿತರಿದ್ದರು.


















Leave a Reply