ಮುಗಿದ SSLC ಪರೀಕ್ಷೆ: ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ

ಮುಗಿದ SSLC ಪರೀಕ್ಷೆ: ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ

ನೇಸರ ಎ.11: ಕರ್ನಾಟಕ ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದು, ಮುಕ್ತಾಯಗೊಂಡಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
ಮಾ. 28ರಿಂದ ಆರಂಭವಾದ ಪರೀಕ್ಷೆ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದು, ಮುಕ್ತಾಯವಾಗಿದೆ. ನಾಳೆಯಿಂದ (ಏ.12) ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ವೀಕ್ಷಿಸಿ SUBSCRIBERS ಮಾಡಿ

 

—ಜಾಹೀರಾತು—

Leave a Reply

You May Have Missed

error: Content is protected !!