ಕೊಕ್ಕಡ: ಗಾಳಿ ಮಳೆಗೆ ರಸ್ತೆ ಮಧ್ಯೆ ತುಂಡಾಗಿ ಬಿದ್ದ ವಿದ್ಯುತ್ ತಂತಿ, ತಕ್ಷಣ ಕಾರ್ಯಪ್ರವೃತ್ತರಾದ ಮೆಸ್ಕಾಂನ ಸಿಬ್ಬಂದಿ

ಕೊಕ್ಕಡ: ಗಾಳಿ ಮಳೆಗೆ ರಸ್ತೆ ಮಧ್ಯೆ ತುಂಡಾಗಿ ಬಿದ್ದ ವಿದ್ಯುತ್ ತಂತಿ, ತಕ್ಷಣ ಕಾರ್ಯಪ್ರವೃತ್ತರಾದ ಮೆಸ್ಕಾಂನ ಸಿಬ್ಬಂದಿ

ನೇಸರ ಎ13: ಇಂದು(ಎ.13ರ) ಸಂಜೆ ಸುರಿದ ವಿಪರೀತ ಗುಡುಗು ಸಹಿತ ಗಾಳಿ ಮಳೆಗೆ ಕೊಕ್ಕಡ ಸಮೀಪದ ಪಟ್ಲಡ್ಕ ಎಂಬಲ್ಲಿ ವಿದ್ಯುತ್ ತಂತಿಯ ಮೇಲೆ ಮರವೊಂದು ಮುರಿದು ಬಿದ್ದು, ವಿದ್ಯುತ್ ತಂತಿ ತುಂಡಾಗಿ ರಸ್ತೆ ಮಧ್ಯೆ ಬಿದ್ದ ಪರಿಣಾಮವಾಗಿ, ಕೆಲಕಾಲ ವಾಹನ ಸಂಚಾರಕ್ಕೆ ತೊಂದರೆಯಾಯಿತು.
ಸ್ಥಳೀಯರ ಮಾಹಿತಿ ಮೇರೆಗೆ ಕಡಬದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿ ಕುಮಾರ್ ರವರು ತಕ್ಷಣ ಕಾರ್ಯಪ್ರವೃತ್ತರಾಗಿ, ಮೆಸ್ಕಾಂನ ಸಿಬ್ಬಂದಿಗಳ ಹಾಗೂ ಸ್ಥಳೀಯರ ಸಹಕಾರದಿಂದ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ತೆರವುಗೊಳಿಸಿ ಯಾವುದೇ ಅನಾಹುತ ಸಂಭವಿಸದಂತೆ ಕ್ರಮ ಕೈಗೊಂಡರು.

—ಜಾಹೀರಾತು—

Leave a Reply

You May Have Missed

error: Content is protected !!