ಬುಡೋಳಿ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಓವರ್ ಟೆಕ್ ಮಾಡುವ ಭರದಲ್ಲಿ ಸರಣಿ ಅಪಘಾತ

ಬುಡೋಳಿ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಓವರ್ ಟೆಕ್ ಮಾಡುವ ಭರದಲ್ಲಿ ಸರಣಿ ಅಪಘಾತ

ನೇಸರ ಎ.19: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಬುಡೋಳಿ ಎಂಬಲ್ಲಿ ಕಾರು, ಬಸ್ ಮತ್ತು ಲಾರಿ ನಡುವೆ ಸರಣಿ ಅಪಘಾತ ನಡೆದ ಘಟನೆ ಏ.19ರಂದು ಮುಂಜಾನೆ ನಡೆದಿದೆ.
ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಲಾರಿಯೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುಂಭಾಗದಲ್ಲಿ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿಗೂ ಡಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿ ನಿಂತಿದೆ. ಘಟನೆಯಲ್ಲಿ ಬಸ್ಸಿಗೆ ಮತ್ತು ಲಾರಿಗೆ ಹಾನಿಯಾಗಿದೆ. ಬೆಳಿಗ್ಗೆ 6.00 ಗಂಟೆಗೆ ಈ ಘಟನೆ ನಡೆದಿದ್ದು, ಘಟನೆಯಿಂದ ಹೆದ್ದಾರಿ ಸಂಪೂರ್ಣವಾಗಿ ಬ್ಲಾಕ್ ಆಗಿದೆ. ಹೆದ್ದಾರಿಯೂದ್ದಕ್ಕೂ ವಾಹನಗಳು ಸಾಲು ಗಟ್ಟಿ ನಿಂತಿತ್ತು. ಸಂಚಾರಕ್ಕೆ ಅಡೆತಡೆ ಉಂಟಾಯಿತು. ಬಳಿಕ ಸಾರ್ವಜನಿಕರು ಸುಗಮ ಸಂಚಾರಕ್ಕೆ ಕಾರ್ಯಾಚರಣೆ ನಡೆಸಿದರು. ಬೆಳಿಗ್ಗೆ 9.30ರ ವೇಳೆಗೆ ಸುಗಮ ಸಂಚಾರ ಸಾಧ್ಯವಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

 

—ಜಾಹೀರಾತು—

Leave a Reply

You May Have Missed

error: Content is protected !!