ಧರ್ಮಸ್ಥಳದಲ್ಲಿ ಡಾ.ಹೇಮಾವತಿ ಹೆಗ್ಗಡೆಯವರಿಗೆ ಗೌರವಪೂರ್ವಕ ಭವ್ಯ ಸ್ವಾಗತ

ಧರ್ಮಸ್ಥಳದಲ್ಲಿ ಡಾ.ಹೇಮಾವತಿ ಹೆಗ್ಗಡೆಯವರಿಗೆ ಗೌರವಪೂರ್ವಕ ಭವ್ಯ ಸ್ವಾಗತ

ನೇಸರ ಎ.23: ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸೇವೆಗಾಗಿ ಎ.23 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ 40ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಗೆಹ್ಲೋಟ್ ಚಂದ್ ರವರು ಡಾಕ್ಟರೇಟ್ ಪ್ರದಾನ ಮಾಡಿದರು.
ಗೌರವ ಡಾಕ್ಟರೇಟ್ ಸ್ವೀಕರಿಸಿದ ಹೇಮಾವತಿ ಹೆಗ್ಗಡೆಯವರಿಗೆ ಧರ್ಮಸ್ಥಳದಲ್ಲಿ ಕ್ಷೇತ್ರದ ನೌಕರ ವೃಂದದವರು, ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಊರಿನ ನಾಗರಿಕರು ಗೌರವಪೂರ್ವಕ ಸ್ವಾಗತಿಸಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಿಂದ ಬೀಡಿನವರೆಗೆ ಡಾ.ಹೇಮಾವತಿ ಹೆಗ್ಗಡೆಯವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

 

—ಜಾಹೀರಾತು—

Leave a Reply

You May Have Missed

error: Content is protected !!