ಅರಸಿನಮಕ್ಕಿಯಲ್ಲಿ ನಾಳೆ ತಹಶೀಲ್ದಾರ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಗ್ರಾಮ ವಾಸ್ತವ್ಯ

ಅರಸಿನಮಕ್ಕಿಯಲ್ಲಿ ನಾಳೆ ತಹಶೀಲ್ದಾರ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಗ್ರಾಮ ವಾಸ್ತವ್ಯ

♦️ವಿ. ಸೂ.:↘️↘️↘️♦️ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ತಮ್ಮ ಅರ್ಜಿ-ಅಹವಾಲುಗಳನ್ನು ಸಂಬಂಧಪಟ್ಟ ಯಾವುದೇ ಇಲಾಖೆಗಳಿಗೆ ಸಲ್ಲಿಸಬಹುದಾಗಿದೆ. ಆದ್ದರಿಂದ ಜನತೆ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಕೋರಿಕೆ.

ನೇಸರ ಮೇ‌.26: ಅರಸಿನಮಕ್ಕಿಯ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಳೆ (ಮೇ 27 ಶುಕ್ರವಾರ) ಬೆಳಿಗ್ಗೆ 10 ಗಂಟೆಯಿಂದ ತಹಶೀಲ್ದಾರ್ ಮತ್ತು ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.
ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಹತ್ಯಡ್ಕ ಗ್ರಾಮದ ಜನರ ಅಹವಾಲು, ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ಅದೇ ರೀತಿ ಅರ್ಹ ಫಲಾನುಭವಿಗಳಿಗೆ ಸಂಧ್ಯಾ ಸುರಕ್ಷಾ, ವೃದ್ಧಪ್ಯ ವೇತನ, ವಿಧವಾ ವೇತನ ಮೊದಲಾದ ಸೌಲಭ್ಯ ಹಾಗೂ ವಿವಿಧ ಇಲಾಖೆಗಳು ಅರ್ಹರಿಗೆ ತಮ್ಮ ಇಲಾಖೆಗಳ ಸೌಲಭ್ಯಗಳನ್ನು ವಿತರಿಸಲಿದ್ದಾರೆ.

ವೀಕ್ಷಿಸಿ SUBSCRIBERS ಮಾಡಿ

ಜಾಹೀರಾತು

Leave a Reply

You May Have Missed

error: Content is protected !!