ನೆಲ್ಯಾಡಿ:ಉಚಿತ ನೇತ್ರ ಚಿಕಿತ್ಸೆ, ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ಶಿಬಿರ

ನೆಲ್ಯಾಡಿ:ಉಚಿತ ನೇತ್ರ ಚಿಕಿತ್ಸೆ, ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ಶಿಬಿರ

ನೇಸರ ಮೇ‌.30: ಲಯನ್ಸ್ ಕ್ಲಬ್ ದುರ್ಗಾಂಬಾ ಆಲಂಗಾರು, ಜೇಸಿಐ ಸಂಸ್ಥೆ ನೆಲ್ಯಾಡಿ ಇದರ ಆಶ್ರಯದಲ್ಲಿ ಆನಂದಾಶ್ರಮ ಸೇವಾ ಟ್ರಸ್ಟ್(ರಿ.) ಪುತ್ತೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಪ್ರಾರ್ಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು ಇದರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ದಿನಾಂಕ 31-05-2022 ನೇ ಮಂಗಳವಾರ ಸ.ಹಿ.ಪ್ರಾ. ಶಾಲೆ ನೆಲ್ಯಾಡಿಯಲ್ಲಿ ಬೆಳಗ್ಗೆ ಗಂಟೆ 9.00ರಿಂದ ಮಧ್ಯಾಹ್ನ ಗಂಟೆ 12.30ರ ತನಕ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಕಾರ್ಯಕ್ರಮದ ಪ್ರಧಾನ ಸಂಘಟಕರಾದ ಗಂಗಾಧರ ಶೆಟ್ಟಿ ಹೊಸಮನೆ, 42ನೇ ನೇತ್ರ ಚಿಕಿತ್ಸಾ ಶಿಬಿರದ ಸಂಘಟಕರು, ಮಾಜಿ ಅಧ್ಯಕ್ಷರು, ನೆಲ್ಯಾಡಿ ಗ್ರಾಮ ಪಂಚಾಯತ್ ರವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ವೀಕ್ಷಿಸಿ SUBSCRIBERS ಮಾಡಿ

ಜಾಹೀರಾತು

Leave a Reply

You May Have Missed

error: Content is protected !!