ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಗೃಹ ಸಚಿವರಿಂದ ಶಿಲಾನ್ಯಾಸ

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಗೃಹ ಸಚಿವರಿಂದ ಶಿಲಾನ್ಯಾಸ

ನೇಸರ ನ9: ಕರ್ನಾಟಕ ರಾಜ್ಯ ಪೊಲೀಸ್ ದ.ಕ ಜಿಲ್ಲಾ ಪೊಲೀಸ್ ಘಟಕ ಧರ್ಮಸ್ಥಳ ಪೊಲೀಸ್ ಠಾಣೆಗೆ ರೂ.2.30 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನ.9 ರಂದು ಜರುಗಿತು.
ಕರ್ನಾಟಕ ಸರಕಾರದ ಗೃಹ ಸಚಿವ ಅರಗ ಜ್ಞಾನೇಂದ್ರರವರು ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ, ಶುಭ ಹಾರೈಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಗೌರವ ಉಪಸ್ಥಿತರಿದ್ದರು.


ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಭಾರತ್ ಪೊಲೀಸ್ ಸೇವಾ ಡಿ.ಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ಮುಖ್ಯ ಅಭಿಯಂತರರಾದ ಎನ್.ಜಿ ಗೌಡಯ್ಯ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಸೋನವಣೆ ಋಷಿಕೇಶ್ ಭಗವಾನ್, ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್, ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳು ಕಾರ್ಯ
ಕ್ರಮದಲ್ಲಿ ಉಪಸ್ಥಿತರಿದ್ದರು

Leave a Reply

You May Have Missed

error: Content is protected !!